ಬೆಳ್ತಂಗಡಿ : ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವಿ ಸಮೀಪ ನಡೆದಿದೆ.
ಕೊಳಂಬೆ ಉಮೇಶ್ ಗೌಡ ಎಂಬವರ ಪುತ್ರಿ ವಿದ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿಯೇ ಇರುತ್ತಿದ್ದ ವಿದ್ಯಾ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರು ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
























