ಪುತ್ತೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಮಳೆಯ ಹಿನ್ನಲೆಯಲ್ಲಿ ತಗ್ಗು ಪ್ರದೇಶ, ನದಿ, ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳದಂತೆ, ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
