ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಜೂ.27 ಗುರುವಾರ ಬೆಳಿಗ್ಗೆ 10.30 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಲಿದೆ.
ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಭಾಸ್ಕರ್ ಕೋಡಿಂಬಾಳ, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಭಾಗವಹಿಸಲಿದ್ದಾರೆ.
ಸವಣೂರು ವಿದ್ಯಾರಶ್ಮಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಸಂಸ್ಮರಣಾ ಉಪನ್ಯಾಸ ನೀಡಲಿದ್ದಾರೆ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
























