ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ. ಸಾಧನೆ ನಿಮ್ಮ ಭವಿಷ್ಯಧಲ್ಲಿ, ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.





























 
 

ವೇದಿಕೆಯಲ್ಲಿ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್, ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಉಪಸ್ಥಿತರಿದ್ಧರು

ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು. ವಿದ್ಯಾರ್ಥಿನಿ ಪ್ರಕೃತಿ ಪ್ರಾರ್ಥಿಸಿದರು. ದೀಕ್ಷಾ ಎಂ. ಆರ್. ಸ್ವಾಗತಿಸಿ, ವಿಶ್ಮಿತಾ ವಂದಿಸಿದರು, ವಿಂದುಶ್ರೀ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top