ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಸಿಲುಕಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ.

ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನ ಈ ಸಂದರ್ಭದಲ್ಲಿ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಗೊಂಡಿದೆ.

ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು ಬಿದ್ದಿರುವುದನ್ನು ಗಮನಿಸಿತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನು ತಂದೆ ಮಜೀದ್ ಪಾರು ಮಾಡಿದ್ದಾರೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.