ಮಂಗಳೂರು: ದ.ಕ.ಜಿಲ್ಲಾ ಪಂಚಾಯತ್ ಹಾಗೂ ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಗುರುವಾರ ಮಂಗಳೂರಿನಲ್ಲಿ ನಡೆಯಿತು.

ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಜಾನ್ ಕುಟಿನ್ಹೊ, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ. ಮಂಗಳೂರು ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಲೋಕಯ್ಯ ಗೌಡ, ಸಂಚಾರಿ ಡಿಸಿಪಿ ದಿನೇಶ್ ಬಾರಿಕೆ ಉಪಸ್ಥಿತರಿದ್ದರು.

ಡಾ.ಪ್ರಭಾತ್ ಬಲ್ನಾಡು ಕೆಂಪೇಗೌಡರ ಕುರಿತು ಉಪನ್ಯಾಸ ನೀಡಿದರು

ಕಾರ್ಯಕ್ರಮದಲ್ಲಿ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಚಿತ್ರ ಬಿಡಿಸುವುದು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಒಕ್ಕಲಿಗ ಸಮುದಾಯದ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರನ್ನು ಸನ್ಮಾನಿಸಲಾಯಿತು.

ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಗುರುದೇವ್ ಎ.ಬಿ., ಸದಾನಂದ ಡಿ.ಪಿ., ನಿರ್ದೇಶಕರಾದ ಬಾಲಕೃಷ್ಣ ಗೌಡ ಬಿ., ಕಿರಣ್ ಬುಡ್ಲೆಗುತ್ತು, ರಕ್ಷಿತ್ ಪುತ್ತಿಲ, ಪೂರ್ಣಿಮಾ ಕೆ.ಎಂ., ಇಂದಿರಾವತಿ, ಕಲಾವತಿ ಸೌಮೇಶ್ ಕುಮಾರ್, ಪುರುಷೋತ್ತಮ ಕೆ.ಎಂ., ಪದ್ಮನಾಭ ಅತ್ಯಾಡಿ, ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ ನಿಡ್ಯಮಲೆ, ನಿರ್ದೇಶಕರಾದ ಸಾರಿಕಾ ಸುರೇಶ್, ಉಪಾಧ್ಯಕ್ಷ, ಪುರಂದರ ಟಿ. ವಿಜಯ ಕುಮಾರ್ ಬೆಳ್ತಂಗಡಿ, ಕಿರಣ್ ಹೊಸೊಳಿಕೆ, ಮಹೇಶ್, ಸುನೀಲ್ ಕೇರ್ನಡ್ಕ, ಶಾಂತಪ್ಪ ಉಳಿಪ್ಪು ಮೋಂಟಡ್ಕ, ಉದ್ಯಮಿ ಒಕ್ಕಲಿಗ ಸಂಘದ ಅಧ್ಯಕ್ಷ ಕೇಶವ ಗೌಡ, ಕೆನರಾ ಕೈಗಾರಿಕೆ ಸಂಸ್ಥೆಗಳ ಉಪಾಧ್ಯಕ್ಷ ಆನಂದ ಪಿ.ಎಚ್.ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಶಿಕ್ಷಕಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಬಳಿಕ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರ ಶಿಷ್ಯೆಯರಿಂದ ಭರತನಾಟ್ಯ ಪ್ರದರ್ಶನ ಜರಗಿತು.