ಆಗುಂಬೆ ಘಾಟ್ ನಲ್ಲಿ ರಸ್ತೆ ಬಿರುಕು | ವಾಹನ ಸಂಚಾರ ನಿಷೇಧ

ಶಿವಮೊಗ್ಗ: ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ನಲ್ಲಿ ಘನ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಭೂ ಕುಸಿತ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಘನ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ ಮತ್ತು ಸಿದ್ದಾಪುರ- ಕುಂದಾಪುರ- ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.































 
 

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ಇತ್ತೀಚೆಗಷ್ಟೇ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಉಂಟಾಗಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬಿರುಕು ಕಾಣಿಸಿದೆ. ಭಾರೀ ಮಳೆಗೆ ಹೊಸದಾಗಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯ ತಳಪದರದ ಮಣ್ಣು ಕುಸಿತಗೊಂಡಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top