ಪುತ್ತೂರು: ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು.
ಅವರು ಪುತ್ತೂರು- ಕೌಡಿಚ್ಚಾರ್ ಸಿಟಿ ಬಸ್ ವ್ಯವಸ್ಥೆಗೆ ಕೌಡಿಚ್ಚಾರ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.
ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಆಗಬೇಕು, ಇಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕರಿಗೆ ತಿಳಿಸಿ ಸಿಟಿ ಬಸ್ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೆಲದಿನಗಳ ಹಿಂದೆ ಮನವಿ ಮಾಡಿದ್ದೆವು ಮನವಿಯನ್ನು ಪುರಸ್ಕರಿಸಿದ ಶಾಸಕರು ಕೆಲವೇ ದಿನಗಳಲ್ಲಿ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ ಇದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಪುತ್ತೂರು ಕ್ಷೇತ್ರಕ್ಕೆ ಈಗಾಗಲೇ ಶಾಸಕರು 1500 ಕೋಟಿ ರೂ ಅನುದಾನವನ್ನು ತಂದಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಾಸಕರು ಬಡವರ ಬಂಧುವಾಗಿ ಪ್ರಸಿದ್ದಿ ಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಕೌಡಿಚ್ಚಾರ್‌ಗೆ ಸಿಟಿ ಬಸ್ ಬೇಕು ಎಂಬ ಬೇಡಿಕೆ ಇತ್ತು ಅದನ್ನು ಈಡೇರಿಸಲು ಯಾರಿದಂಲೂ ಸಾಧ್ಯವಾಗಿಲ್ಲ. ಇಚ್ಚಾಶಕ್ತಿ ಇದ್ದರೆ ಯಾವುದೇ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಾವು ಹೇಮನಾಥ ಶೆಟ್ಟಿ ಹೇಳಿದರು.