ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಪ್ರಗತಿ ಪರ ಕೃಷಿಕ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಗೌಡ ಗಿರಿನಿವಾಸ ಕಟ್ಟತ್ತಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು.
ಶಾಸಕ ರಾಜೇಶ್ ನಾಯ್ಕ್, ಉಳಿಪ್ಪಾಡಿಗುತ್ತು, ತಹಶೀಲ್ದಾರ್ ಅರ್ಚನಾ ಡಿ. ಭಟ್, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಗೌರವ ಸಲಹೆಗಾರ, ಸಂಪನ್ಮೂಲ ವ್ಯಕ್ತಿ ಲಿಂಗಪ್ಪ ಗೌಡ ಅಳಿಕೆ, ಅಧ್ಯಕ್ಷ ಮೋನಪ್ಪ ಗೌಡ ಶಿವಾಜಿನಗರ, ತಾಲೂಕು ಆಡಳಿತಾಧಿಕಾರಿಗಳು, ಶಿಕ್ಷಣಾಧಿಕಾರಿಗಳು ಇಲಾಖೆಗಳ ಅಧಿಕಾರಿ ವರ್ಗ, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.