ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಬೆಳ್ತಂಗಡಿ: ಖಾಸಗಿ ಬಸ್‌ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.29ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಅಯ್ಯಪ್ಪಗುಡಿಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದ್ದು ಈ ವೇಳೆ ಖಾಸಗಿ ಬಸ್‌ ಚಾಲಕ ಗಾಯಗೊಂಡಿದ್ದಾರೆ. ಉಳಿದಂತೆ ಎರಡೂ ಬಸ್‌ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಸಂತೆಕಟ್ಟೆ ಬಳಿಯಿಂದ ಟ್ರಾಫಿಕ್‌ ಜಾಮ್ ಉಂಟಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top