ಭೀಕರ ಕಾರು ಅಪಘಾತ | ಉದ್ಯಮಿ ಮೃತ್ಯು

ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ನಡೆದ ಭೀಕರ ಕಾರು ಅಪಘಾತದಲ್ಲಿ ಬೆಳ್ತಂಗಡಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಉಜಿರೆ ಕಾಲೇಜು ರಸ್ತೆಯಲ್ಲಿ ಇಂದು ನಡೆದಿದೆ.

ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕರ ಪುತ್ರ ಪ್ರಜ್ವಲ್ ನಾಯಕ್ (35) ಅಪಘಾತದಿಂದ ಮೃತಪಟ್ಟವರು.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು-ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.





























 
 

ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ- ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ. ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲಕ ಹಾಗೂ ಉದ್ಯಮಿಯಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top