ಚೆಲ್ಯಡ್ಯ ಮುಳುಗು ಸೇತುವೆ ಸಂಚಾರ ಸ್ಥಗಿತ ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ

ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಮುನ್ನೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪುತ್ತೂರಿನಿಂದ ಪಾಣಾಜೆ – ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top