ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81) ಇಂದು ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರಳದಿದ್ದಾರೆ.

ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top