ಬೆಂಗಳೂರು: ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (48) ಬೆಂಗಳೂರಿನಲ್ಲಿ ಇಂದು ನಿಧನರಾದರು.
ಹಂಸ ಮೊಯ್ಲಿ ಅವರು ಭರತನಾಟ್ಯ, ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು. ಪುತ್ರಿಯ ನಿಧನದ ಸುದ್ದಿ ತಿಳಿದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೆಲವು ಸಮಯಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಒರ್ವ ಅದ್ಭುತ ಕಲಾವಿದೆಯನ್ನು ಕಲಾಭಿಮಾನಿಗಳು ಕಳೆದುಕೊಂಡಿದ್ದು ಅಪಾರ ಅಭಿಮಾನಿಗಳು ಬಂಧು ಮಿತ್ರರು ಕಂಬನಿ ಮಿಡಿದಿದ್ದಾರೆ.