ಪುತ್ತೂರು: ಪುತ್ತೂರು-ಹಾರಾಡಿ, ತಾರಿಗುಡ್ಡೆ ಪ್ರದೇಶದಲ್ಲಿ 33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ ಪುತ್ತೂರು-ಸವಣೂರು-ನೆಲ್ಯಾಡಿ ಮಧ್ಯೆ ಇರುವ ಅಪಾಯಕಾರಿ ಮರಗಳ ತೆರವು ಕಾರ್ಯ ನಡೆಯುವುದರಿಂದ ಜು.2 ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 3 ರ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು.
33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಕೆವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 33/11 ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಮತ್ತು ಪುತ್ತೂರು 110/33/11 ಕೆವಿ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್ ಗಳಾದ ವಾಟರ್ ಸಪ್ಲೈ ಮತ್ತು ಇಂಡಸ್ಟ್ರಿಯಲ್ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.