ಬಸ್ ನಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳವು

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ ಬ್ಯಾಗ್ ಕಳವಾಗಿರುವುದಾಗಿ ವರದಿಯಾಗಿದೆ.

ಮಹಿಳೆಯೋರ್ವರು ನಗರದ ಬ್ಯಾಂಕ್ ನ ಲಾಕರ್ ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದು ಹ್ಯಾಂಡ್ ಬ್ಯಾಗ್ ನಲ್ಲಿ ಹಾಕಿ ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ನಲ್ಲಿ ಇತರ ಲಗೇಜ್ ಜತೆ ತೆಗೆದುಕೊಂಡು ಬೆಂಗಳೂರಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.

ಹಾಸನ ತಲುಪಿದಾಗ ಅವರ ಹ್ಯಾಂಡ್ ಬ್ಯಾಗ್ ಪರಿಶೀಲಿಸಿದಾಗ ಚಿನ್ನಾಭರಣಗಳು ಕಳವಾಗಿದ್ದವು. ಮಂಗಳೂರು – ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳವು ಮಾಡಿರಬಹುದೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top