ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಅನ್ ಬೌಂಡ್’ ತಾಂತ್ರಿಕ ಉತ್ಸವ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಅನ್ ಬೌಂಡ್ ಎನ್ನುವ 3 ದಿನಗಳ ತಾಂತ್ರಿಕ ಉತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.

ಬದಲಾದ ತಾಂತ್ರಿಕತೆಯೊಂದಿಗೆ ಹೆಜ್ಜೆ ಹಾಕುತ್ತಾ ತನ್ನಲ್ಲಿರುವ ತಾಂತ್ರಿಕ ಜ್ಞಾನವನ್ನು ಇತರರಿಗೆ ಹಂಚಿಕೊಳ್ಳುವುದಕ್ಕೆ ಸೂಕ್ತ ವೇದಿಕೆಯನ್ನು ನೀಡುವುದಕ್ಕಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ರೀಸರ್ಚ್ ಎಂಡ್ ಪ್ರೆಸೆಂಟೇಶನ್, ಪ್ರಾಬ್ಲೆಮ್ ಸಾಲ್ವಿಂಗ್, ಮೆಷಿನ್ ಲರ್ನಿಂಗ್, ಡೇಟಾ ಪ್ರಾಸೆಸಿಂಗ್, ಸರ್ಕ್ಯೂಟ್ ಡಿಸೈನ್ ಎಂಡ್ ಡಿಬಗ್ಗಿಂಗ್, ಸರ್ವೆ, ಮಾಡೆಲಿಂಗ್, ಯುನಿಟ್ಸ್ ಎಂಡ್ ಮೆಶರ್‌ಮೆಂಟ್ಸ್ ಹೀಗೆ ಕಂಪ್ಯೂಟರ್ ವಿಭಾಗಕ್ಕೆ ಸಂಬಂಧಿಸಿದಂತೆ 4, ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ 2, ಸಿವಿಲ್ ವಿಭಾಗದಲ್ಲಿ 2, ಮೆಕ್ಯಾನಿಕಲ್ ವಿಭಾಗದಲ್ಲಿ 2 ಹಾಗೂ ಎಲ್ಲಾ ವಿಭಾಗಗಳಿಗೆ ಸಂಬಂಧಿಸಿದಂತೆ 1 ಹೀಗೆ ಒಟ್ಟು 11 ವಿಷಯಗಳಲ್ಲಿ ವಿವಿಧ ತಾಂತ್ರಿಕ ಸ್ಪರ್ಧೆಗಳು ನಡೆದವು.







































 
 

ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಅಡ್ವಾನ್ಸ್ಡ್ ಮೈಕ್ರೋ ಡಿವೈಸಸ್ ಸಂಸ್ಥೆಯಲ್ಲಿ ಸಿಲಿಕಾನ್ ಡಿಸೈನ್ ಇಂಜಿನಿಯರ್ ಪ್ರಮೋದ್ ಬಾಳಿಗಾ ಕಾರ್ಯಕ್ರಮ ಉದ್ಘಾಟಿಸಿದರು. ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಎಲ್‌ಟಿಐ ಮೈಂಡ್‌ಟ್ರೀ ಸಂಸ್ಥೆಯ ಹಿರಿಯ ನಿರ್ದೇಶಕ ಕೃಷ್ಣಮೂರ್ತಿ ಪಟ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆಡಳಿತ ಮಂಡಳಿ ನಿರ್ದೇಶಕಿ ವಿದ್ಯಾ.ಆರ್.ಗೌರಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ, ಕಾರ್ಯಕ್ರಮ ಸಂಯೋಜಕ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ಮುಖ್ಯಸ್ಥ ಡಾ.ಗೋವಿಂದರಾಜ್.ಪಿ., ವಿದ್ಯಾರ್ಥಿ ಸಂಯೋಜಕ ರವಿನಾರಾಯಣ.ಕೆ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೂರುದಿನಗಳ ಕಾಲ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಭಯರಾಜ್ ಭಟ್.ಎನ್, ಅಪೇಕ್ಷಾ.ಡಿ, ಮಹೇಶ್.ಪಿಕೆ., ಪ್ರಜ್ಞಾಶಂಕರಿ.ಎಮ್.ಎನ್., ಸಾತ್ವಿಕ್, ಜೀವಿತ್.ಎಸ್., ಶ್ರೀನಿಧಿ.ಡಿ.ವಿ., ಶ್ರೀನಿವಾಸ್ ಹೆಗ್ಡೆ ಎಂ. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top