ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದಲ್ಲಿ ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು.
ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ಪತಿ, ತಂದೆ, ತಾಯಿ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.