ಜುಲೈ 25 ರಿಂದ 27 ರವರೆಗೆ NEET-PG ಪರೀಕ್ಷೆ | 2 ಗಂಟೆ ಮುಂಚಿತಾಗಿ ಪ್ರಶ್ನೆ ಪತ್ರಿಕೆ ಸಿದ್ಧ

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪಡೆಯುವುದಕ್ಕೆ ನಡೆಯಲಿರುವ ನೀಟ್ -ಪಿಜಿ ಪರೀಕ್ಷೆ ಜುಲೈ ತಿಂಗಳ 25 ರಿಂದ ಜುಲೈ 27 ರವರೆಗೆ ನಡೆಯಲಿದ್ದು, ಮುಖ್ಯವಾಗಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ತಡೆಗಟ್ಟುವುದಕ್ಕಾಗಿ ಪರೀಕ್ಷೆ ನಡೆಯುವುದಕ್ಕೂ 2 ಗಂಟೆಗಳ ಮುಂಚಿತಾಗಿ ಪ್ರಶ್ನೆ ಪರೀಕ್ಷೆಯನ್ನು ಸಿದ್ಧಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್ 23 ಕ್ಕೆ ನಿಗದಿಯಾಗಿದ್ದ NEET-PG ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭದ ಕೆಲವು ಗಂಟೆ ಮುಂಚೆ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರಿಂದ ಹಲವು ರೀತಿಯ ಪ್ರತಿಭಟನೆ ನಡೆದಿದ್ದು, ನಂತರ ನೀಟ್-ಪಿಜಿ ಪರೀಕ್ಷೆಯ ದಿಢೀರ್ ರದ್ದು ಮಾಡಿದ್ದರಿಂದ ತೊಂದರೆಯಾಗಿರುವ ಬಗ್ಗೆ, ವಿದ್ಯಾರ್ಥಿಗಳ ಹಿತರಕ್ಷಣೆಯ ದೃಷ್ಟಿಯಿಂದಲೇ ಪರೀಕ್ಷೆ ರದ್ದು ಮಾಡಲಾಗಿತ್ತು ಎಂದು ಸರ್ಕಾರ ತನ್ನ ನಡೆಯನ್ನು ಸಮರ್ಥಿಸಿಕೊಂಡಿತ್ತು.

ಈ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುವ NEET-PG ಯ ಪರೀಕ್ಷೆ ಸಂಪೂರ್ಣ ಮೌಲ್ಯಯುತವಾಗಿ ಕೈಗೊಳ್ಳುತ್ತದೆ ಮತ್ತು ಈ ನಿರ್ಧಾರವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top