ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ | ರಾಜ್ಯ ಸರಕಾರದಿಂದ ಸುತ್ತೋಲೆ

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದು ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದೆ. ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ತರಗತಿಗಳಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುವುದರಿಂದ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ.

ಆದೇಶದನ್ವಯ ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ  ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ. ಇದರೊಂದಿಗೆ ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.. ನಿಷೇಧ ಉಲ್ಲಂಘಿಸಿದ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು ಎಂದು ಆದೇಶದಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top