ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು.
ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಲಿಖಿತ ಪರೀಕ್ಷೆಯ ಅಂಕಗಳನ್ನು ಪರಿಗಣಿಸಬೇಕು. 10ನೇ ತರಗತಿಗೆ ಮಾತ್ರ ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ನಡೆಸುವ ವಾರ್ಷಿಕ ಪರೀಕ್ಷೆಯ ಅಂಕಗಳನ್ನು ಫಲಿತಾಂಶವಾಗಿ ಪ್ರಕಟಿಸಬೇಕೆಂದು ಎಲ್ಲ ಶಾಲೆಗಳಿಗೂ ಇಲಾಖೆ ನಿರ್ದೇಶನ ನೀಡಿದೆ.