ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ಶಾಸಕರಿಂದ 50 ಸಾವಿರ ರೂ. ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕ ಅಶೋಕ್ ರೈಯವರು 50 ಸಾವಿರ ರೂ. ಸಹಾಯಧನ ನೀಡಿದರು.

ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾ ಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top