ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು 34 ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು.

ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ. ಆಕಸ್ಮಿಕ ಮರಣಾವಾದರೆ ಒಂದು ಲಕ್ಷ  ಮತ್ತು ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು 3 ಸಾವಿರ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.































 
 

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬ್ಬಂದಿ ರಚನಾ ಸ್ವಾಗತಿಸಿ, ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top