ಶಿರ್ವ : ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.
ಪಳ್ಳಿ ದಾದಬೆಟ್ಟು ನಿವಾಸಿ ಜಯರಾಮ ಆಚಾರ್ಯ- ಚಂದ್ರಿಕಾ ದಂಪತಿ ಪುತ್ರಿ ಭಾಗ್ಯಶ್ರೀ (16) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.
ಹೃದಯ ಸಂಬಂಧಿ ಕಾಯಿಲೆ ಇದ್ದ ಅವರು ಮಂಗಳವಾರ ಶಾಲೆಗೆ ಬಂದಿದ್ದರು. ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಹೆತ್ತವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ತಿಳಿದು ಬಂದಿದೆ.
ಮೃತರು ತಂದೆ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.