ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದ್ದು, ಇನ್ನು ಮುಂದೆ ಆಧಾರ್ ಕಾರ್ಡು ಮಾಡಿಸಲು ಅಂಚೆ ಕಚೇರಿ ಮುಂದೆ ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕ ಅಶೋಕ್ ರೈ ತಿಳಿಸಿದರು.
ಪುತ್ತೂರು ತಾಲೂಕು ಕಚೇರಿಯಲ್ಲಿ ನೂತನ ಆಧಾರ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ನೂತನ ಕೇಂದ್ರದಲ್ಲಿ 18 ವರ್ಷ ಪ್ರಾಯದವರೆಗಿನ ಮಕ್ಕಳಿಗೆ ಹೊಸ ಆಧಾರ್ ,18 ರ ನಂತರದವರ ಆದಾರ್ ತಿದ್ದುಪಡಿ. ನಂಬರ್ ತಿದ್ದುಪಡಿ, ವಿಳಾಸ ಸೇರಿದಂತೆ ತಿದ್ದುಪಡಿಮಾಡಲು ಅವಕಾಶವಿದೆ. ವಾರದ ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕೇಂದ್ರ ಕಾರ್ಯಾಚರಿಸಲಿದೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ಹೇಳಿದರು.
ತಹಶಿಲ್ದಾರ್ ಪುರಂದರ್ ಹೆಗ್ಡೆ,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ,ಕೆಪಿಸಿಸಿ ಸಂಯೋಜಕ ಚಂದ್ರಹಾಸ ಶೆಟ್ಟಿ,ಬ್ಲಾಕ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.