ಪುತ್ತೂರು: ಬನ್ನೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.
ನಿವೃತ್ತ ಬ್ಯಾಂಕ್ ಮ್ಯಾನೇಜರ್ ಟಿ. ಜಿ. ಗೌಡ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಎಳವೆಯಿಂದಲೇ ಪರಿಸರದ ಪ್ರಜ್ಞೆ ಮೂಡಿ ಬರಬೇಕು, ಇದು ಕೇವಲ ಶಾಲೆಗಳಲ್ಲಿ ನಡೆಯುವ ಒಂದು ದಿನದ ವನಮಹೋತ್ಸವಕ್ಕೆ ಸೀಮಿತವಾಗಿರದೆ ನಮ್ಮ ದಿನನಿತ್ಯದ ಬದುಕಿನಲ್ಲಿ ಹಾಸು ಹೊಕ್ಕಾಗಿರಬೇಕು ಎಂದು ಹೇಳಿದರು.
ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಗೌಡ ಕಳುವಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರದ ಬಗ್ಗೆ ಎಚ್ಚೆತ್ತುಕೊಳ್ಳೋಣ ಎಂಬ ಕಿವಿ ಮಾತು ಹೇಳಿದರು.
ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕ ಎ.ವಿ ನಾರಾಯಣ, ಪ್ರಧಾನ ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಗೌಡ ಮಲುವೇಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಪುಷ್ಪಾವತಿ ಕಳುವಾಜೆ, ಪ್ರತಿಭಾ ದೇವಿ, ಡಾ. ಅನುಪಮಾ, ಗಂಗಾಧರ ಗೌಡ, ಕಾನೂನು ಸಲಹೆಗಾರ ದೀಕ್ಷಾ ವಾಮನ ಗೌಡ, ಶಾಲಾ ಶಿಕ್ಷಕ ವೃಂದ, ಬೋಧಕೇತರ ವೃಂದ, ಪೋಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಂಚಾಲಕ ಎ .ವಿ. ನಾರಾಯಣ ಸ್ವಾಗತಿಸಿ, ಶಿಕ್ಷಕಿ ಪ್ರಕ್ಷುತ ಸಂವಿಧಾನದ ಪೂರ್ವ ಪೀಠಿಕೆ ವಾಚಿಸಿದರು. ಕಚೇರಿ ಸಹಾಯಕಿ ಚಂದ್ರಿಕಾ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ಉಮೇಶ್ ಮಳುವೇಲು ವಂದಿಸಿದರು. ಶಿಕ್ಷಕಿ ಯಶುಭಾ ರೈ ಕಾರ್ಯಕ್ರಮ ನಿರೂಪಿಸಿದರು.