ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿಗೆ ಹಾನಿ

ವಿಟ್ಲ: ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಕಾರು ಜಖಂಗೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಈ ಘಟನೆ ಸಂಭವಿಸಿದ್ದು, ಶಬರಿ ರತ್ನಾಕರ ಎಂಬವರು ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಉರುಳಿ ಬಿದ್ದಿದೆ.

 ಪರಿಣಾಮ ಕಾರು ಜಖಂಗೊಂಡಿದ್ದು, ತಕ್ಷಣವೇ ಸ್ಥಳೀಯರು ಕಾರಿನ ಮೇಲೆ ಬಿದ್ದಿರುವ ಮರವನ್ನು ತೆರವುಗೊಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top