ಕೃಷಿಕ ನವೀನ್ ಚಾತುಬಾಯಿಯವರಿಗೆ ಮ್ಯಾಕ್ಸ್ ಲೈಫ್ ಕೃಷಿಕ ರತ್ನ ಪುರಸ್ಕಾರ

ಐವರ್ನಾಡು : ಐವರ್ನಾಡು ಗ್ರಾಮದ ಕೃಷಿಕರಾದ ಸಿ.ಕೆ.ನವೀನ್ ಚಾತುಬಾಯಿ ಅವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಕೊಡ ಮಾಡುವ ಕೃಷಿಕ ರತ್ನ ಪುರಸ್ಕಾರ ಜುಲೈ 5 ರಂದು ನೀಡಲಾಗಿದೆ.

ಮಂಗಳೂರಿನ ರೀಜನಲ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ಮಾಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಸೀನಿಯ‌ರ್ ಮ್ಯಾನೇಜರ್ ಸುಧಾಕರ್ ಶೆಟ್ಟಿ ಮತ್ತು ಕಂಪನಿಯ ಅಧಿಕಾರಿಗಳು ಸಿಬ್ಬಂದಿಗಳು ನಿರ್ವಹಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top