ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಯೊಬ್ಬನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಬಂಧಿತ ಆರೋಪಿ.
ಖಚಿತ ವರ್ತಮಾನದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಉಳ್ಳಾಲಬೈಲು ಪರಿಸರದಲ್ಲಿ ಬೈಕನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 90000 ಮೌಲ್ಯದ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಬೈಕ್ ಸೇರಿ ಸುಮಾರು ಎರಡು ಲಕ್ಷದ ಐದು ಸಾವಿರದ ಐನೂರು ಮೊತ್ತದ ಸೂತ್ತನ್ನು ವಶಪಡಿಸಿಕೊಂಡಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೋಲಿಸ್ ನಿರೀಕ್ಷಕರಾದ ಶ್ಯಾಂ ಸುಂದರ್ ಹೆಚ್ ಎಂ, ಪಿಎಸ್ಪಿಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಗಳು. ಪಾಲ್ಗೊಂಡಿದ್ದರು.
























