ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಸಂಘ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದಲ್ಲಿ ಜು.27 ರಂದು ತೆಂಕಿಲ ಒಕ್ಕಲಿಗ ಸಮುದಾಯ ಭವನದಲ್ಲಿ ನಡೆಯುವ ಆಟಿ ಹಬ್ಬ-2024 ಹಾಗೂ ಆ.16 ರಂದು ನಡೆಯುವ ವರಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಡುಗಡೆ ಮಾಡಲಾಯಿತು.
ಒಕ್ಕಲಿಗ ಗೌಡ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ ಪತ್ರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ, ಸಂಘದ ಪದಾಧಿಕಾರಿಗಳಾದ ಶಿವರಾಮ ಗೌಡ ಮತಾವು ಮತ್ತಿತರರು ಉಪಸ್ಥಿತರಿದ್ದರು.
























