ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಸದಸ್ಯರಿಗೆ ಹಣ್ಣಿನ ಗಿಡ ಉಚಿತವಾಗಿ ನೀಡುವ ಮೂಲಕ ವನಮಹೋತ್ಸವವನ್ನು ಇಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಮನೆಗೊಂದು ಗಿಡ, ಊರಿಗೊಂದು ವನ ಧ್ಯೇಯ ವಾಕ್ಯದೊಂದಿಗೆ ನಡೆದ ಕಾರ್ಯಕ್ರಮವನ್ನು ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಸಂಘದ ಪದಾಧಿಕಾರಿಗಳಿಗೆ ಗಿಡ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಸಂಘದ ಗೌರವಾಧ್ಯಕ್ಷ ಚಿ್ದಾನಂದ ಬೈಲಾಡಿ, ಅಧ್ಯಕ್ಷ ರವಿ ಮುಂಗ್ಲಿಮನೆ, ಗೌಡ ಮಹಿಳಾ ಸಂಘದ ಅಧ್ಯಕ್ಷೆ ವಾರಿಜ ಬೆಳ್ಯಪ್ಪ ಗೌಡ, ಯುವ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ, ಸಂಘದ ಖಜಾಂಜಿ ಶಿವರಾಮ ಗೌಡ ಮತಾವು, ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
























