ಕಡಬ: ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುಳಿಕುಕ್ಕು ಸೇತುವೆಯಲ್ಲಿ ಸೋಮವಾರ ನಡೆದಿದೆ.

ನಿರಂತರ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಪುಳಿಕುಕ್ಕು ಸೇತುವೆ ಮತ್ತು ರೈಲು ಸೇತುವೆ ಮದ್ಯ ಭಾಗದಲ್ಲಿರುವ ಪೊದೆಯೊಂದರಲ್ಲಿ ಸಿಲುಕಿಕೊಂಡು ರಕ್ಷಣೆಗಾಗಿ ಕೂಗಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾತ್ರಿಯಿಂದಲೇ ಕೂಗಾಡುವ ಧ್ವನಿ ಕೇಳುತ್ತಿತ್ತು ಎಂದು ಮಾಹಿತಿ ನೀಡಿದ್ದಾರೆ.
ಬ್ಯಾಗ್ ಸೇತುವೆ ಪಕ್ಕ ಪತ್ತೆಯಾಗಿದೆ ಎನ್ನಲಾಗುತ್ತಿದ್ದು ನದಿಯಿಂದ ಕೆಳಕ್ಕೆ ಹಾರಿದ್ದಾನೆ ಅಥವಾ ಇನ್ಯಾವುದಾದರೂ ಘಟನೆ ನಡೆಯಿತೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಯುವಕನನ್ನು ರಕ್ಷಣೆ ಮಾಡಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
