ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.8 ಸೋಮವಾರ ರಜೆ ನೀಡಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಸಂಭಾವ್ಯ ಅಪಾಯ ಸಂಭವಿಸುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ನದಿ, ಸಮುದ್ರ ದಡಗಳಿಗೆ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಲಾಗಿದೆ.