ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ದ.ಕ.. ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದ.ಕ.ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.