ಪುತ್ತೂರು: ಜನರ ಆರೋಗ್ಯಕ್ಕಾಗಿ ಸರಕಾರ ವಿವಿಧ ಯೋಜನೆಗಳನ್ನು ಜಾರಿಮಾಡುತ್ತಿದೆ. ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು, ಆರೋಗ್ಯದ ವಿಚಾರದಲ್ಲಿ ಹೆಚ್ಚು ಕಾಳಜಿ ವಹಿಸಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಮಂಗಳವಾರ ಬನ್ನೂರು ಕಜೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಆರೋಗ್ಯ ಮತ್ತು ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಸರಕಾರಿ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಸೌಲಭ್ಯವನ್ನು ನೀಡುತ್ತಿದೆ. ವೈದ್ಯರುಗಳನ್ನು ನೇಮಕ ಮಾಡುವ ಮೂಲಕ ವೈದ್ಯರು ಮತ್ತು ಔಷಧಿ ಕೊರತೆಯನ್ನು ಪರಿಹರಿಸಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಮಾತನಾಡಿ, ಸ್ಥಳೀಯ ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತಾ, ಉಪಾಧ್ಯಕ್ಷ ಶೀನಪ್ಪ ಮೂಲ್ಯ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೃಷ್ಣಾನಂದ, ಪಿಡಿಒ ಚಿತ್ರಾ, ಉದ್ಯಮಿ ಡೆನ್ನಿಸ್ ಮಸ್ಕರೇನಸ್, ಕಟ್ಟಡ ಮಾಲಿಕ ತಿಮ್ಮಣ್ಣ ಕಜೆ, ರತ್ನಾಕರ ಪ್ರಭು, ಗ್ರಾಪಂ ಸದಸ್ಯ ಸುಪ್ರಿತ್, ಸೌಮ್ಯ, ಆರೋಗ್ಯ ಸುರಕ್ಣಾಧಿಕಾರಿ ದಮಯಂತಿ, ಆಶಾ ಕಾರ್ಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.