ಪುತ್ತೂರು: ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹರ್ಯಾಣ ಮೆಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ, ಮಹಮ್ಮದ್ ನಾಸೀರ್ ಬಂಧಿತ ಆರೋಪಿ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರವಿ.ಬಿ.ಎಸ್. ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಜಂಬೂರಾಜ್ ಮಹಾಜನ್ ರವರ ಮಾರ್ಗದರ್ಶನದಲ್ಲಿ ಎ.ಎಸ್.ಐ ಪರಮೇಶ್ವರ್ ಕೆ, ಹೆಚ್.ಸಿ ಮಧು ಕೆ ಎನ್, ಪಿ.ಸಿ ಮಂಜುನಾಥ್ ರವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ 5. 133/2013 0 341, 353,332, 279 ಐಪಿಸಿ ಪ್ರಕರಣದಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮಾರೆಸಿಕೊಂಡಿದ್ದ ಹರ್ಯಾಣ ಮೆಹನುವಾಡ್ ಜಿಲ್ಲೆಯ ನಂಗಲ್ ಮವರಿಪುರ್ ನಿವಾಸಿ ಮಹಮ್ಮದ್ ನಾಸೀರ್ ಎಂಬಾತನನ್ನು ಪತ್ತೆ ಹಚ್ಚಿ ಜು.8 ರಂದು ಪ್ರಿನ್ಸಿಪಾಲ್ ಸೀನಿಯರ್ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ಪುತ್ತೂರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.