ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ಸಾವನ್ನಪ್ಪಿದ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ.
ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ ಬಾಲಕಿ.
ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು. ಜು. 9 ರಂದು ಆಕೆಯ ಆರೋಗ್ಯ ತೀವ್ರ ಹದಗೆಟ್ಟಿದ್ದು, ತಕ್ಷಣವೇ ಆಕೆಯನ್ನು ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ದಿದ್ದರು, ಆದರೆ ಮನೆಗೆ ಹಿಂದಿರುಗುವ ಮಾರ್ಗ ಮಧ್ಯೆ ಆಕೆ ಪ್ರಜ್ಞಾಹೀನಳಾಗಿದ್ದಳು. ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.