ರಾಜ್ಯದಲ್ಲಿ ಅನರ್ಹ ಬಿಪಿಎಲ್‍ ಕಾರ್ಡು ರದ್ದು | ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬಡ ಕುಟುಂಬದವರಿಗೆ ಸರ್ಕಾರ ಹಲವು ರೀತಿಯಲ್ಲಿ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಪಡಿತರ ಚೀಟಿ ವಿಚಾರಣೆ ಕೂಡ ಒಂದಾಗಿದೆ ಅನ್ನಬಹುದು. ಈಗಾಗಲೇ ರೇಷನ್ ಕಾರ್ಡ್‍ ಗಾಗಿ ಹಲವು ಜನ ಕಾಯುತ್ತಿದ್ದಾರೆ.  ಆದರೆ ಅನರ್ಹ ರೇಷನ್ ಕಾರ್ಡ್ ನ್ನು ರದ್ದುಪಡಿಸುವ ಕುರಿತು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್ ಕಾರ್ಡ್ ಇದ್ದು, ಯಾರು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅಂತವರನ್ನು ಪತ್ತೆ ಹಚ್ಚಿ ಕಾರ್ಡ್ ರದ್ದು ಮಾಡುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ. ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top