ಕರಾವಳಿ ಪ್ರಾಧಿಕಾರದಿಂದ ಅನುದಾನ ನೀಡುವಂತೆ ಸಚಿವರಿಗೆ ಮನವಿ ನೀಡಿದ ಶಾಸಕ ಅಶೋಕ್ ರೈ

ಪುತ್ತೂರು: ಕರಾವಳಿ ಪ್ರಾಧಿಕಾರದಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಸಾಂಘಿಕ ಮತ್ತು ಸಂಯೋಜನಾ ಸಚಿವ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ  ಡಿ ಸುಧಾಕರ್ ಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕ ಅಶೋಕ್ ರೈ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ದಿ ಕೆಲಸಗಳು ಆಗಬೇಕಾಗಿದ್ದು, ಕ್ಷೇತ್ರದ ಜನರಿಂದ ಬೇಡಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಲವಾರು ವರ್ಷಗಳಿಂದ ಜನರು ಮನವಿ ಮಾಡುತ್ತಿದ್ದರೂ ಅಭಿವೃದ್ದಿ ಕೆಲಸಗಳು ನಡೆದಿಲ್ಲ ಎಂಬ ಆರೋಪ ಕ್ಷೇತ್ರದ ಜನರಲ್ಲಿ ಇದ್ದು ಈ ಬಾರಿ ಪುತ್ತೂರಿಗೆ ಕರಾವಳಿ ಪ್ರಾಧಿಕಾರದಿಂದ ಹೆಚ್ಚು ಅನುದಾನ ನೀಡುವ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ.

ಶಾಸಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು ಅಭಿವೃದ್ದಿ ವಿಚಾರದಲ್ಲಿ ಸಲ್ಲಿಸಿದ ಬೇಡಿಕೆಯನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top