ಖ್ಯಾತ ನಟಿ, ನಿರೂಪಕಿ ಅಪರ್ಣಾ  ಇನ್ನಿಲ್ಲ.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಕಿರಿಯ ವಯಸ್ಸಿನಲ್ಲೇ ಇಹಲೋಕ್ಯ ತ್ಯಜಿಸಿದ್ದಾರೆ.

ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅಪರ್ಣಾ  ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.































 
 

ಅವರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು 90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top