ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಪ್ರಜೆಗೂ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಅಗತ್ಯತೆ ಪ್ರಸ್ತುತ ಸಂದರ್ಭದಲ್ಲಿ ಅವಶ್ಯವಿದೆ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ, ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳಲು ಸಾಧ್ಯವಾಗದೇ ಇರಬಹುದು, ಆದರೂ ನಮ್ಮ ದೈನಂದಿನ ಜೀವನ ಯಾವುದೇ ಅಡೆತಡೆಯಿಲ್ಲದೇ ನೆಮ್ಮದಿಯಿಂದ ಸಾಗಲು ಅಲ್ಪ ಪ್ರಮಾಣದಲ್ಲಾದರೂ ಕಾನೂನು ಜಾಗೃತಿ ಪಡೆಯಬೇಕು. ಎಂದು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಶ್ರೀರಕ್ಷಾ ಹೇಳಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉನ್ನತ ಆಡಳಿತ ಹುದ್ದೆಗಳಲ್ಲಿ ಕರ್ತವ್ಯ ಮಾಡುವುದರ ಮೂಲಕವಾಗಿ ಸದೃಢ ದೇಶ ಕಟ್ಟುವ ಮನಸ್ಸು ವಿದ್ಯಾರ್ಥಿಗಳಲ್ಲಿ ಇರಬೇಕಾಗಿದೆ. ಇದಕ್ಕಾಗಿ ಕನಸು ಕಾಣಬೇಕು. ಎತ್ತರಕ್ಕೆ ಬೆಳೆಯುವ ತುಡಿತ ಹುಟ್ಟಿಕೊಳ್ಳಬೇಕು. ಕನಸು ನನಸು ಮಾಡಿಕೊಳ್ಳುವಲ್ಲಿ ಪೂರಕವಾಗಿ ಸ್ಪಂದಿಸುವ ವಿಷಯಗಳೆಲ್ಲವನ್ನೂ ಅರಿಯುವ ಪ್ರಯತ್ನ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದು ಹೇಳಿದರು.































 
 

ಪೋಕ್ಸೋ ಕಾಯಿದೆ, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಮಕ್ಕಳ ಹಕ್ಕುಗಳು ಬಗ್ಗೆ ಮಾಹಿತಿಯನ್ನು ನೀಡಿದರು. ನಂತರದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಕು.ಹರ್ಷಿತಾ ಸ್ವಾಗತಿಸಿ, ಕು.ಶಾನ್ವಿ ವಂದಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top