ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಹೆತ್ತವರ, ಪೋಷಕರ ಸಭೆ ಮತ್ತು ಪ್ರತಿಭೋತ್ಸವ 2024-25 ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಮಂಟ್ಯಯ್ಯ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ಹಾಗೂ ಹೆತ್ತವರ ಮತ್ತು ವಿದ್ಯಾರ್ಥಿಗಳ ಸಂಬಂಧ ಮಧುರವಾಗಿ ಸ್ನೇಹಮಯವಾಗಿರಬೇಕಾದ ಅಗತ್ಯವಿದ್ದು, ಹೀಗಾದಲ್ಲಿ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಸುಜಾತ ಮಾತನಾಡಿ, ಮಕ್ಕಳು ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರ ಮೂಲಕ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಬಹುದು ಎಂದರು.
ಸರಕಾರಿ ಹಿರಿಯ ಪ್ರಾಧಮಿಕ ಶಾಲಾ ಮುಖ್ಯ ಶಿಕ್ಷಕಿ ಶಾರದ ಶುಭ ಹಾರೈಸಿದರು. ಪ್ರತಿಭೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಪ್ರೌಢಶಾಲಾ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ವೇದಿಕೆಯಲ್ಲಿ ಅನಾವರಣಗೊಳಿಸಿದರು
ನಿವೃತ್ತ ಉಪನ್ಯಾಸಕಿ ಸುಕನ್ಯ ದೇಲಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು, ಸಂಸ್ಥೆಯ ಎಲ್ಲಾ ಅಧ್ಯಾಪಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.