ಫೈನಾನ್ಸ್ ನಲ್ಲಿ ದರೋಡೆಗೆ ಯತ್ನಿಸಿದ ಮೂವರ ಬಂಧನ | ಲಕ್ಷಾಂತರ ಮೌಲ್ಯದ ಸೊತ್ತು ವಶಕ್ಕೆ

ಬಜಪೆ: ಬುರ್ಖಾ ಧರಿಸಿ ಬಂದು ಆ್ಯಸಿಡ್ ಎರಚಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.

ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31), ಸುರತ್ಕಲ್ ಕೋಡಿಕರೆಯ ಧನರಾಜ್ ಯಾನೆ ಧನು (30) ಹಾಗೂ ಬಾಳ ಕುಂಬಳಕೆರೆಯ ಕುಸುಮಾಕರ ಯಾನೆ ಅಣ್ಣು (37) ಬಂಧಿತ ಆರೋಪಿಗಳು.

ಬಂಧಿತರಿಂದ 15 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಬಜಪೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.



































 
 

ತಾಲೂಕು ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹಾ ಅವರ ಬಜಪೆ ಪೇಟೆಯಲ್ಲಿರುವ ಬಜಪೆ ಫೈನಾನ್ಸ್‌ಗೆ ಜು. 4.ರಂದು ಸಂಜೆ ಬುರ್ಖಾ ಧರಿಸಿ ಬಂದಿದ್ದ ಮೂವರು ಚಿನ್ನಾಭರಣ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಗಾಗಲೇ ಪ್ರೀತೇಶ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ ಒಂದು ಕಳವು ಪ್ರಕರಣ, ಧನರಾಜ್ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ 2 ಹಾಗೂ ಮಾಡುಬಿದರೆ ಠಾಣೆಯಲ್ಲಿ 1 ಕೊಲೆಯತ್ನ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಒಂದು ಜೀವ ಬೆದರಿಕೆ ಪ್ರಕರಣ, ಕುಸುಮಾಕರನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2 ಹಾಗೂ ಬಜಪೆ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣಗಳು ದಾಖಲಾಗಿದೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top