ಬೆಂಗಳೂರು: ಶಾಸಕರ ಭವನದ ಎದುರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಬ್ರಹ್ಮಾಂಡ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಅನುದಾನ ದುರ್ಬಳಕೆ ಸೇರಿದಂತೆ ಜನವಿರೋಧಿ ನಿಲುವುಗಳನ್ನು ಖಂಡಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣಗಳ ಸಿಬಿಐ ತನಿಖೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯೇಂದ್ರ ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್,ಬಿಜೆಪಿ, ಉಪಾಧ್ಯಕ್ಷ ಅರವಿಂದ ಬೆಲ್ಲದ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಶಾಸಕ ಆರಗ ಜ್ಞಾನೇಂದ್ರ, ಶ್ರೀಗಾಲಿ ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಎಸ್.ಮುನಿರಾಜು, ಸಿ.ಕೆ.ರಾಮಮೂರ್ತಿ, ಜಗದೀಶ್ ಗುಡಗುಂಟಿ, ಮಹೇಶ್ ಟೆಂಗಿನಕಾಯಿ, ಶೈಲೇಂದ್ರ ಬೆಲ್ದಾಳೆ, ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ, ಎನ್. ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಹೇಮಲತಾ ನಾಯಕ್, ಶಾಂತಾರಾಮ ಸಿದ್ದಿ, ಕೆ.ಎಸ್. ನವೀನ್ ಸೇರಿದಂತೆ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.