ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು : ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಇಂದು ಪತ್ತೆಯಾಗಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಗೆ ಮೇಲ್ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ತಿಳಿದು ಬಂದಿದೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top