ಪುತ್ತೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಮತ್ತು ಮರು ಪರೀಕ್ಷೆಗೆ ಆಗ್ರಹಿಸಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಎನ್ ಎಸ್ ಯುಐ ಅಧ್ಯಕ್ಷ ಎಡ್ವರ್ಡ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್ ಎಸ್ ಯುಐ ಮಾಜಿ ಅಧ್ಯಕ್ಷ ಕಾವು ಹೇಮಾನಾಥ ಶೆಟ್ಟಿ ಮಾತನಾಡಿ, ನೀಟ್ ಅಕ್ರಮ ಗಂಭೀರ ವಿಷಯವಾಗಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಲಘುವಾಗಿ ಪರಿಗಣಿಸುತ್ತಿರುವುದು ಖಂಡನೀಯ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂದು ದೇಶದ್ಯಾಂತ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಜಯ ಸಿಗಲಿದೆ ಎಂದರು.
ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಮಾತನಾಡಿ, ಕೇಂದ್ರ ಸರಕಾರ ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.
ಎನ್ ಎಸ್ ಯುಐ ಅಧ್ಯಕ್ಷ ಎಡ್ವರ್ಡ್ ಮಾತನಾಡಿ, ನೀಟ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ದೊರಕುವವರೆಗೂ ನಾವು ಹೋರಾಟ ಮುಂದುವರೆಸುತ್ತೇವೆ ಎಂದರು.
ರಾಜ್ಯ ಎನ್ ಎಸ್ ಯುಐ ಉಪಾಧ್ಯಕ್ಷ ಫಾರೂಕ್ ಬಾಯಬೆ, ಕಾರ್ಯದರ್ಶಿ ಭಾತೀಷ್ ಅಳಕೆಮಜಲು, ಎನ್ ಎಸ್ ಯುಐ ಪ್ರಮುಖ ಭವಿಷ್ ಸುವರ್ಣ ಮಾತನಾಡಿದರು. ಪ್ರತಿಭಟನೆಯಲ್ಲಿ ಹಿರಿಯ ನಾಯಕರಾದ ಸಂತೋಷ್ ಭಂಡಾರಿ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಯೋಜನಕ ಸುಹೈಲ್, ಜಿಲ್ಲಾ ನಾಯಕ ಆಸ್ಟನ್ ಫೆರ್ನಾಂಡಿಸ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.