ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 ಆಗಿದ್ದು ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ:































 
 

ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ 2 ಎ: 18, ಪ್ರವರ್ಗ 2 ಬಿ: 5, ಪ್ರವರ್ಗ 3 ಎ: 5, ಪ್ರವರ್ಗ 3 ಬಿ: 6 ಹುದ್ದೆಗಳಿವೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಶೇ.50 ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನದೊಂದಿಗೆ ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮಾ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೆಟ್ ಹೊಂದಿರಬೇಕು. ಕಂಪ್ಯೂಟರ್ ಸೈನ್ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ 24,910 ರೂ. – 55,655 ರೂ. ಮಾಸಿಕ ವೇತನ ಜತೆಗೆ ಡಿಎ & ಎಚ್.ಆರ್.ಎ. ಮುಂತಾದ ಸೌಲಭ್ಯ ದೊರೆಯಲಿದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/3ಬಿ ಅಭ್ಯರ್ಥಿಗಳು 1,180 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕೆ 1 ಸೇರಿದ ಅಭ್ಯರ್ಥಿಗಳು 590 ರೂ. ಪಾವತಿಸಬೇಕು.

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ :

ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್, ಸಾಮಾನ್ಯಜ್ಞಾನ, ಸಹಕಾರಿ ವಿಷಯ / ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಭಾರತದ ಸಂವಿಧಾನ, ಸಮಾಜದ ಯುಕ್ತವಾದ ಚಟುವಟಿಕೆ ಮತ್ತು ವಸ್ತುನಿಷ್ಟ ವಿಷಯಗಳ ಪ್ರಶ್ನೆಗಳಿರುತ್ತವೆ.

ಅಲ್ಲಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://scdccbank.com/recruitment/) ಅಪ್ಲಿಕೇಷನ್ ಫಾರಂ ಭರ್ತಿ ಮಾಡಿದ ಬಳಿಕ ಡೌನ್‌ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 18ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಿ: The Chief Executive Officer, The South Canara District Central cooparative Bank Ltd. Kodialbail, Mangalore -575003

ಹೆಚ್ಚಿನ ಮಾಹಿತಿಗೆ: (0824) – 2440381, 2440882 ನಂಬರ್‌ಗೆ ಕರೆ ಮಾಡಿ.

(https://scdccbank.com/recruitment/addi-notification.pdf) ವಿಳಾಸಕ್ಕೆ ಭೇಟಿ ನೀಡಿ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top