ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನೀರು | ವಾಹನ ಸವಾರರಿಂದ ಪರದಾಟ

 ಕಡಬ : ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ರಸ್ತೆಯ ಓಡ್ಲ ಎಂಬಲ್ಲಿ ಮಳೆನೀರು ರಸ್ತೆಯಲ್ಲೇ ಹರಿಯುತ್ತಿದ್ದು ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ಪರದಾಡುವಂತಾಗಿದೆ.

ರಾಜ್ಯ ಹೆದ್ದಾರಿ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೋರ್ವರು ಅಕ್ರಮವಾಗಿ ಅಗೆದು, ಮಣ್ಣನ್ನು ಚರಂಡಿ ಮೇಲೆ ಹಾಕಿದ ಕಾರಣ ಮಳೆ ನೀರು ಚರಂಡಿಯಲ್ಲಿ ಸರಾಗವಾಗಿ ಹರಿಯಲಾಗದೆ ರಸ್ತೆಯಲ್ಲೇ ಹರಿಯುತ್ತಿದೆ.

ನಿರಂತರವಾಗಿ ಸುರಿಯುವ ಮಳೆಯಿಂದಾಗಿ ನೀರು ಚರಂಡಿಯಲ್ಲಿ ಹರಿಯದೆ ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ತೋಡಿನಂತಾಗಿದ್ದು, ಮುಂದೆ ಅಪಾಯಕಾರಿ ತಿರುವು ಇದ್ದು, ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ.



































 
 

ಈ ಕುರಿತು ವಾಹನ ಚಾಲಕರು ಮತ್ತು ಸಾರ್ವಜನಿಕರು ಮಾದ್ಯಮ ಪ್ರತಿನಿಧಿಗಳಿಗೆ ಹಾಗೂ ಪಿಡಬ್ಲ್ಯುಡಿ. ಇಂಜಿನಿಯರ್‌ಗೆ ಕರೆ ಮಾಡಿ ಸಮಸ್ಯೆ ಬಗ್ಗೆ ಮೌಕಿಕ ದೂರು ಸಲ್ಲಿಸಿದ್ದಾರೆ . ರಸ್ತೆ ಅಗೆತ ಮಾಡಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಕಾನಿಷ್ ಚಂದ್ರ ಅವರು ರಸ್ತೆ ಅಗೆಯುವುದಕ್ಕೆ ಯಾರಿಗೂ ಅನುಮತಿ ನೀಡಿರುವುದಿಲ್ಲ. ರಸ್ತೆ ಅಗೆದು ಸಮಸ್ಯೆ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top