ಸವಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ, ಸುಳ್ಯ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಆಶ್ರಯದಲ್ಲಿ ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸವಣೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು ಯುವಕ ಮಂಡಲ ಹಾಗೂ ಪುಣ್ಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜು.21 ಭಾನುವಾರ ಸವಣೂರು ಯುವ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯುವ ಶಿಬಿರದ ಸಭಾ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ, ಸುಳ್ಯ ಕೆ.ವಿ.ಜಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಸವಣೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಪುಣ್ಯಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ ಸುಲಾಯ, ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ., ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ಲಡಿ ಪಾಲ್ಗೊಳ್ಳಲಿದ್ದಾರೆ.
ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ ವಿಭಾಗ, ಇ.ಎನ್.ಟಿ ವಿಭಾಗ, ಚರ್ಮ ಮತ್ತು ಲೈಂಗಿಕ ರೋಗ ವಿಭಾಗ, ಸ್ತ್ರೀ ರೋಗ ವಿಭಾಗ, ಎಲುಬು ಮತ್ತು ಕೀಲು, ದಂತ ಚಿಕಿತ್ಸಾ ವಿಭಾಗ, ಶ್ವಾಸಕೋಶ ಮತ್ತು ತುರ್ತು ಚಿಕಿತ್ಸಾ ವಿಭಾಗದಲ್ಲಿ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.