ಪುತ್ತೂರು: ತಾಲೂಕು ಪಂಚಾಯತ್ ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಜು.18ರಿಂದ ಆ.3ರವರೆಗೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪುತ್ತೂರು ನಗರಸಭೆ ಪೌರಾಯುಕ್ತ ಮಧು ಯಸ್. ಮನೋಹರ್ ಭಾಗವಹಿಸಲಿದ್ದಾರೆ. ನೆಮ್ಮದಿ ವೆಲ್ನೆಸ್ ಸೆಂಟರ್ ಮಾಲಕ ಪ್ರಭಾಕರ್ ಸಾಲಿಯಾನ್ ಶಿಬಿರದ ಕುರಿತು ಮಾಹಿತಿ ನೀಡಲಿದ್ದಾರೆ.
ಮಧುಮೇಹ, ಅಧಿಕ ರಕ್ತದೊತ್ತಡ, ಸಂಧಿವಾತ, ವೆರಿಕೋಸ್ ವೇನ್, ಸ್ನಾಯು ಸೆಳೆತ, ಊತ, ಪಾರ್ಕಿನ್ ಸನ್, ಸಯಾಟಿಕಾ, ಸರ್ವಿಕಲ್ ಸ್ಪಾಂಡಿಲೈಟಿಸ್, ನಿದ್ರಾಹೀನತೆ, ಥೈರಾಯಿಡ್, ಪಾರ್ಶ್ವವಾಯು, ಬೆನ್ನುನೋವು, ಬೊಜ್ಜು ನಿವಾರಣೆ ಇನ್ನಿತರ ಎಲ್ಲಾ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಮತ್ತು ಪರಿಹಾರವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.